ಸರಸಿಜಾಕ್ಷ ಸರಸದಿಂದ ಸರಸಿಜೋದ್ಭವಗೊಲಿದು ಬಂದ ಪ
ಉರಸಿನ ಮ್ಯಾಲೆ ಸರಸಿಜಾಕ್ಷಿಯನಿರಿಸಿ ಬಂದಅ.ಪ.
ಧೀರ ಶರಧಿ ಗಂಭೀರ ವರಘನಸಾರ ಕಸ್ತೂರಿ ತಿಲಕಧರಹೀರ ಮೌಕ್ತಿಕ ಕೇಯೂರ ಧರಿಸಿದ ನವನೀತಚೋರ ಬಂದ 1
ನಂದ ಗೋಪಿಗಾನಂದವೂಡಿದ ಕಂದ ಗೋಕುಲದಿ ಬಂದಅಂದದಿಂದ ಸೌಂದರಿಯರ ಗೋವಿಂದ ಮುಕುಂದ 2
ಅಂಗನೆಯರ ಕುಚಗಳಾಲಿಂಗನವ ಮಾಡಿ ನವಮೋಹನಾಂಗರಂಗವಿಠಲನು ನಮ್ಮಂತರಂಗದೊಳಗಿಹ ಕಲ್ಮಷಭಂಗ3
No comments:
Post a Comment