Sunday, 24 November 2019

ತಿಳಿಯ ಬರದೆಲೆ ಮನವೆ tiliya baradale manave

ತಿಳಿಯ ಬರದೆಲೆ ಮನವೆ, ತೀರ್ಥ ಯಾತ್ರೆಯ ಫಲವು ಪ
ಸುಲಭದಲಿ ಸದ್ಗತಿಯ ಸೂರೆಗೊಂಬುವರಿಗಲ್ಲದೆ ಅ
ನೂರೆಂಟು ತಿರುಪತಿಯ ಯಾತ್ರೆಯನು ನಾನೊಲ್ಲೆವಾರದೊಂದ್ಹೊತ್ತು ಉಪವಾಸವನು ನಾನೊಲ್ಲೆಸಾರ ರೇಣುವೆಯುಂಡು ಕಡೆಯ ಬಾಗಿಲ ಕಾಯ್ವನೀರ ಗೌಡಿಯ ಮಗನ ಮಗನ ಮಗನೆನಿಸೆನ್ನ1
ಪಂಚಾನ್ನ ಪರಮಾನ್ನವಾವುದನು ನಾನೊಲ್ಲೆಚಂಚಲಗೊಳಿಸುವ ಭೋಗ ಭಾಗ್ಯವ ನಾನೊಲ್ಲೆಹಿಂಚದೆ ದಾಸೋಹ ಮಾಳ್ಪವರ ಮನೆಯ ಕಾಯ್ವಉಂಚ ಗೌಡಿಯ ಮಗನ ಮಗನ ಮಗನೆನಿಸೆನ್ನ2
ಪಟ್ಟೆ ಪಟ್ಟಾವಳಿ ದುಕೂಲವನು ನಾನೊಲ್ಲೆಪಟ್ಟೆ ನಾಮದ ಬರಿಯ ಪ್ರದರ್ಶನ ನಾನೊಲ್ಲೆಸೃಷ್ಟಿಯೊಳು ನಿನ್ನ ಭಜಿಪ ಭಕ್ತರ ಮನೆ ಕಾಯ್ವಮುಟ್ಟುಗೌಡಿಯ ಮಗನ ಮಗನ ಮಗನೆನಿಸೆನ್ನ 3
ಮುತ್ತಿನಾಭರಣ ತಾಳಿ ಪದಕವ ನಾನೊಲ್ಲೆಸತ್ತಿಗೆಯ ನೆರಳಿನಲಿ ಸಾಗುವುದ ನಾನೊಲ್ಲೆನಿತ್ಯ ನಿನ್ನ ನೆನೆವರ ಮನೆಯ ಬಾಗಿಲ ಕಾಯ್ವತೊತ್ತುಗೌಡಿಯ ಮಗನ ಮಗನ ಮಗನೆನಿಸೆನ್ನ 4
ಆಶೆ ಪಾಶಗಳೆಂಬ ಜಂಜಾಟ ನಾನೊಲ್ಲೆದೇಶಾನುದೇಶಗಳ ತಿರುಗಾಟ ನಾನೊಲ್ಲೆಶ್ರೀಶಾದಿಕೇಶವನ ಭಜಿಪರ ಮನೆಯ ಕಾಯ್ವಕಸಗೌಡಿಯ ಮಗನ ಮಗನ ಮಗನೆನಿಸೆನ್ನ 5

No comments:

Post a Comment