ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ ಪ
ಪರಂಜ್ಯೋತಿ ಪರಬ್ರಹ್ಮ ಪರಮಪುರುಷ ಓಂ ಎಂದುಅ
ಹುಟ್ಟು ಬಣ್ಣ ಒಂದರೊಳಗೆ ಕಟ್ಟು ಬಣ್ಣ ಒಂದು ಮಾಡಿಕಟ್ಟಿ ಕುಟ್ಟಿ ಕಾಸಿ ಕರಗಿ ಮೂರು ಬಣ್ಣವಮುಟ್ಟಿ ಮಾಡಿ ನಾಲ್ಕು ಬಣ್ಣ ಒಪ್ಪವಿಕ್ಕಿ ಅದರ ಮೇಲೆಗಟ್ಟಿಯಾಗಿ ನೆಲೆಗೆ ನಿಂತವೈದು ಬಣ್ಣವುಸೃಷ್ಟಿಯಾರೇಳು ಬಣ್ಣ ಎಂಟು ಒಂಬತ್ತರೊಳಗೆ ನೆಟ್ಟನೆ ಹತ್ತು ಹನ್ನೊಂದು ಹನ್ನೆರಡು ತೋರುವಘಟ್ಟಿ ಹದಿಮೂರು ಹದಿನಾಲ್ಕು ಹದಿನೈದರಿಂದಕಟ್ಟಕಡೆಗೆ ನಿಂದ ಹದಿನಾರು ಬಣ್ಣ ಓಂ ಎಂದು 1
ಭದ್ರಕಂಬ ಒಂದರೊಳಗೆ ಉದ್ದವಾದ ಕೊನೆಯ ಮೇಲೆಸಿದ್ಧಿಯಾದ ಚಿಗುರು ಹೂವು ಕಾಯಿ ಹಣ್ಣನುಮೆದ್ದು ಹೋದ ಪಕ್ಷಿ ಬಂದು ಹದ್ದು ಹಿಡಿದು ಉದ್ದಕೆತ್ತಿಬುದ್ಧೀ ಹೀನನಾಗಿ ಬೆಳೆದು ಧರೆಗೆ ಬಿದ್ದುದಕದ್ದು ಮತ್ತೊಬ್ದ ತರುತಿದ್ದ ದಾರಿಯನ್ನು ಕಟ್ಟಿಒದ್ದು ಹಿಡಿದು ಗುದ್ದಿ ನೂಕಿ ಸೆಳೆದುಕೊಂಡುದ ಸಾಧ್ಯವಾಯಿತೆಂದು ತನ್ನ ಮನೆಗೆ ತಂದು ಸತಿಗೆ ಕೊಡಲುಶುದ್ಧವಾಗಿ ಸುಟ್ಟು ಮಡಗಲೆದ್ದು ಹಾರಿ ಹೋಯಿತೆಂದು 2
ತಿಳಿಯುತಿಹುದು ತಿಳಿಯದಿಹುದು ಬೆಳೆಯುತಿಹುದು ಬೆಳೆಯದಿಹುದುಹೊಳೆಯುತಿಹುದು ಹೊಳೆಯದಿಹುದು ಸುಳಿಯದಿಹುದುತಿಳಿದು ನಾಲ್ಕು ದಿಕ್ಕಿನಲ್ಲಿ ಹೊಳೆದು ಎಂಟು ದಿಕ್ಕ ತೋರಿಬಳಸಿ ಸುತ್ತ ತಿರುಗುತಿಹುದು ಬಳಲಿ ಬಳಲದೆಒಳಗೆ ಹೊರಗೆ ತೋರುತಿಹುದು ಅಳಿದ ವಸ್ತು ಮುಟ್ಟದಿಹುದುಕಳವಳಂಗೆ ಎರಡು ಗುಣವ ತೋರಿ ಮೆರೆವುದುತಿಳಿದು ನೋಡೆ ಕೈಗೆ ಸಿಕ್ಕಿ ಒಳಗೆ ಬಯಲ ತೋರುತಿಹುದುಪ್ರಣವ ಒಂದು ಕೋಟಿ ನುಂಗಿ ಉಗುಳಿತಿಪ್ಪುದೋಂ ಎಂದು 3
ತತ್ತಿಯಾದ ಬ್ರಹ್ಮನೀಗೆ ದಿಕ್ಕು ಅಖಿಲಾಂಡವೆಲ್ಲಹೆತ್ತ ತಂದೆಗಾದವನೆ ನಿತ್ಯವುಳ್ಳವ ಸತ್ತು ಹುಟ್ಟಲಿಲ್ಲವೆಂದು ಅತ್ತ ನೋಡಿ ಇತ್ತ ತಿರುಗೆ ತತ್ತಿಯೊಳಗೆ ಬೆಳೆದವೆಲ್ಲ ಸತ್ತವೆನ್ನುತಸತ್ತು ಹೋದ ದೀಪದಂತೆ ಉತ್ಪತ್ತಿಯಾದವಗೆಸತ್ತು ಸತ್ತು ಹುಟ್ಟುವುದು ತಪ್ಪದೆನ್ನುತಎತ್ತಿ ಜಗವ ನುಂಗಿ ತನ್ನ ಹೊಟ್ಟೆಯೊಳಿಂಬಿಟ್ಠುಕೊಂಡುಕತ್ತಲೆಗೆ ಕರ್ತೃವೆಂಬ ಜಗವಸತ್ಯ ಕೇಳಿರೋ ಎಂದು | 4
ಪಂಕಜನ ತಾಯಿ ಸುತನ ಅಂಕದಲ್ಲಿ ಹುಟ್ಟಿ ಜಗವಮಂಕು ಮಾಡುತಿಪ್ಪ ಮಾಯೆ ಹತ್ತು ಶಂಕೆಯಶಂಕೆಕಾರ ಶತ್ರುಮಿತ್ರರಿಬ್ಬರಿಗಾಧಾರವೆಂದುಕುಂಕರದಿಪ್ಪತ್ತೊಂದು ಕೋಟಿ ಪಾಶವುಓಂಕಾರದೊಳಗೆ ಪುಟ್ಟಿ ಓಂಕಾರದೊಳಗೆ ಬೆಳೆದುಓಂಕಾರದೀ ಜಗವ ಎತ್ತಿ ಮೆರೆವುದೋ ಎಂದು 5
ಪ್ರಣವ ಒಂದರೊಳಗೆ ಒಂದು ಕೋಟಿಯನ್ನು ತೋರಿ ಪಡೆಯ (ಕಡೆಯ ?)ಕುಣಿಕೆಯೊಳಗೆ ಎಂಟು ಕೋಟಿಯನ್ನು ತೋರುತತೃಣವ ಹಿಡಿದು ಬರೆಯುತಿಪ್ಪ ಒಂದು ರೋಮ ಕೂಪದಲ್ಲಿಕುಣಿಕೆಯೊಳಗೆ ಜಗದ ಜೀವರಾಶಿ ಎಲ್ಲವಸುಳಿದ ವಿಷ್ಣು ಬ್ರಹ್ಮನೆಂಬ ಹಣೆಯ ಕಣ್ಣ ರುದ್ರನೆಂಬ ಮಣೆಯಗಾರರೆಪ್ಪತ್ತೇಳು ಕೋಟಿ ಸಂಖ್ಯೆಯುಹಣೆಯ ಕಾಣದವರ ಕೀಲಿನೆಣಿಕೆಯಲ್ಲಿ ಹೊಲಬುದಪ್ಪಿಪ್ರಣವ ಒಂದು ಕೇಳುತಿಪ್ಪ ಪರಬ್ರಹ್ಮ ಓಂ ಎಂದು 6
ನಳಿನಜಾಂಡವೊಂದರೊಳಗೆ ಭುವನ ಪದಿನಾಲ್ಕು ಬಸು-ರೊಳಗೆ ಇಂತು ತಮ್ಮ ಸುಳಿ ನಾಭಿ ಕಮಲ ಮಧ್ಯದಿತಿಳಿದು ನೋಡು ಇತ್ತ ಕೆಳಗೆ ಪಾದ ಮೇಲೆ ಮಸ್ತಕವುತೊಳಲಿ ಕಾಣೆ ವೇದವೆಂದು ಬಳಲಿ ಬಳಲದೆಪ್ರಳಯ ಕೋಟಿ ಪ್ರಾಣಿಗಳಿಗೆ ಹೊಳವುಗಾಣಲೀಸದಂತೆಬೆಳೆದು ಹೋಗುವ ಗತಿಯೆಂಬುದಿತ್ತಲರಿಸುತಕಳವಿನವರು ಬಂದು ಇಳೆಯ ಮೇಲೆ ನಿಂದುಬಿಳಿಗಿರಿವಾಸ ತಿರುಮಲೇಶ ಆದಿಕೇಶವ ತಾನೆಯೆಂದು 7
No comments:
Post a Comment