Labels

Sunday, 1 December 2019

ಹೂವ ತರುವರ ಮನೆಗೆ huva taruvavara manege

ಹೂವ ತರುವರ ಮನೆಗೆ ಹುಲ್ಲ ತರುವೆ ಪ
ಆವ ಪರಿಯಲಿ ಸಲಹೊ ದೇವ ಚಿನ್ಮಯನೆ ಅ
ಈರೇಳು ಜನ್ಮದಿಂ ದಾಸನಾಗಿಹೆ ನಾನುಸೇರಿದೆನೊ ತವ ಶರಣರ ಸೇವೆಗೆಘೋರ ದುರಿತಗಳೆಂಬ ವಾರಿಧಿಯ ಬತ್ತಿಸಿನಾರಸಿಂಹನೆ ಕಾಯೊ ನಮ್ಮ ಕುಲಸ್ವಾಮಿ 1
ರಂಗನಾಥನೆ ನಿನ್ನ ಡಿಂಗರಿಗನೋ ನಾನುಡಂಗುರವ ಹೊಯಿಸಯ್ಯ ದಾಸನೆಂದುಭಂಗಪಡಿಸದೆ ನಿನ್ನ ಶರಣರೊಳಗಿಂಬಿಟ್ಟುಗಂಗೆ ಜನಕನೆ ಕಾಯೊ ಚರಣಕ್ಕೆ ಶರಣು 2
ಎಷ್ಟು ಮಾಡಲು ನಿನ್ನ ಬಂಟನೋ - ವೈಷ್ಣವರಹುಟ್ಟು ದಾಸಿಯ ಮಗನು ಪರದೇಶಿಯೋಸೃಷ್ಟಿಗೊಡೆಯ ಕಾಗಿನೆಲೆಯಾದಿಕೇಶವನೆ - ಕೈಬಿಟ್ಟೆಯಾದರೆ ನಿನಗೆ ಹರಿದಾಸರಾಣೆ 3

No comments:

Post a Comment