Monday, 9 December 2019

ಕೊಕೊಕೋ ಎನ್ನಿರೊ kokoko enniro

ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲಕೊಕೊಕೋ ಎನ್ನಿರೊ - ನಮ್ಮ ಪ
ಗೋಕುಲದೊಳಗೊಬ್ಬ ಕಳ್ಳ ಬರುತಾನೆಂದುಕೊಕೊಕೋ ಎನ್ನಿರೊ ಅ
ಹೊದ್ದಿ ಮೊಲೆಯನುಂಡವಳಸುವನೆ ಕೊಂದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಕದ್ದುಕೊಂಡೊಯ್ವ ರಕ್ಕಸರನೆಲ್ಲರ ಕಾಲಲೊದ್ದೊರಸಿದ ಕಳ್ಳ ಕೊಕೊಕೋ ಎನ್ನಿರೊಹದ್ದು ಹಗೆಯ ಹಾಸಿಗೆಯ ಮೇಲೊರಗಿದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಅರ್ಧದೇಹನ ಕೈಯ ತಲೆಯ ಕಪಟದಿಂದಕದ್ದು ಬಿಸುಟ ಕಳ್ಳ ಕೊಕೊಕೋ ಎನ್ನಿರೊ 1
ಕೆಂಜಾಜಿಯ ಮಣಿ ಮಲ್ಲಿಗೆ ದಂಡೆಯರಂಜೆ ಕದ್ದ ಕಳ್ಳ ಕೊಕೊಕೋ ಎನ್ನಿರೊಗುಂಜಿಯ ದಂಡೆಯ ಕಲ್ಲಿಯ ಚೀಲದಮಂಜು ಮೈಯ್ಯ ಕಳ್ಳ ಕೊಕೊಕೋ ಎನ್ನಿರೊಅಂಜದೆ ಗೊಲ್ಲರ ಹಳ್ಳಿಯೊಳಗೆ ಹಾಲನೆಂಜಲಿಸಿದ ಕಳ್ಳ ಕೊಕೊಕೋ ಎನ್ನಿರೊಸಂಜೆ ಬೈಗಿನಲ್ಲಿ ಕರೆಯುವ ಸತಿಯರಅಂಜಿಸಿದ ಕಳ್ಳ ಕೊಕೊಕೋ ಎನ್ನಿರೊ 2
ಕೇಸರಿ ಎಂಬ ರಕ್ಕಸರನೆಲ್ಲರ ಕೊಂದವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಮೋಸದಿ ಬಲಿಯ ದಾನವ ಬೇಡಿ ಅನುದಿನಬೇಸರಿಸಿದ ಕಳ್ಳ ಕೊಕೊಕೋ ಎನ್ನಿರೊಮೀಸಲ ಅನ್ನವ ಕೂಸಾಗಿ ಸವಿದುಂಡವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಸಾಸಿರ ನಾಮಕ್ಕೆ ಹೆಸರಾದ ಚಪ್ಪನ್ನದೇಶದ ದಾರಿಗಳ್ಳ ಕೊಕೊಕೋ ಎನ್ನಿರೊ 3
ಆಕಳೊಳಾಡಿ ಪರಲೋಕಕೆ ನಡೆದಂಥಆಕೆವಾಳ ಕಳ್ಳ ಕೊಕೊಕೋ ಎನ್ನಿರೊಭೂಕಾಂತೆಯ ಸೊಸೆಯರನೆತ್ತೆ ಬಲುಹಿಂದನೂಕಿ ತಂದ ಕಳ್ಳ ಕೊಕೊಕೋ ಎನ್ನಿರೊಗೋಕುಲದೊಳು ಪುಟ್ಟಿ ಗೊಲ್ಲರೆಲ್ಲರ ಕೈಲಿಸಾಕಿಸಿಕೊಂಡ ಕಳ್ಳ ಕೊಕೊಕೋ ಎನ್ನಿರೊಸಾಕಾರನಾಗಿ ಈ ಲೋಕವನೆಲ್ಲವಆಕ್ರಮಿಸಿದ ಕಳ್ಳ ಕೊಕೊಕೋ ಎನ್ನಿರೊ4
ಕ್ಷೀರವಾರಿಧಿ ವೈಕುಂಠನಗರಿಯನುಸೇರಿಸಿದ ಕಳ್ಳ ಕೊಕೊಕೋ ಎನ್ನಿರೊದ್ವಾರಾವತಿಯನು ನೀರೊಳು ಬಚ್ಚಿಟ್ಟಊರುಗಳ್ಳ ಬಂದ ಕೊಕೊಕೋ ಎನ್ನಿರೊದ್ವಾರಕೆಯಾಳುವ ಉಭಯದಾಸರ ತನ್ನಊರಿಗೊಯ್ದ ಕಳ್ಳ ಕೊಕೊಕೋ ಎನ್ನಿರೊಕಾರಣಾತ್ಮಕ ಕಾಗಿನೆಲೆಯಾದಿಕೇಶವಕ್ಷೀರ ಬೆಣ್ಣೆಯ ಕಳ್ಳ ಕೊಕೊಕೋ ಎನ್ನಿರೊ 5

No comments:

Post a Comment