ಮಗನಿಂದೆ ಗತಿಯುಂಟೆ ಜಗದೊಳಗೆನಿಗಮಾರ್ಥ ತತ್ತ್ವವಿಚಾರದಿಂದಲ್ಲದೆ ? ಪ
ತ್ರಿಗುಣರಹಿತ ಪರಮಾತ್ಮನ ಧ್ಯಾನದಿಹಗಲಿರುಳು ನಿತ್ಯಾನಂದದಿಂದತೆಗೆದು ಪ್ರಪಂಚವಾಸನೆಯ ಬಿಟ್ಟವರಿಗೆಮಗನಿದ್ದರೇನು ಇಲ್ಲದಿದ್ದರೇನು ?1
ಲಲನೆಯರು ಪುರುಷರು ತಮತಮ್ಮ ಕಾಮದಸಲುವಾಗಿ ಕೂಡೆ ಶೋಣಿತ ಶುಕ್ಲದಿಮಿಳಿತವಾದ ಪಿಂಡ ತನ್ನ ಪೂರ್ವಕರ್ಮದಿಂದನೆಲಕೆ ಬೀಳಲು ಅದು ಸಲಹಿ ರಕ್ಷಿಪುದೆ ? 2
ಪರಮ ದುಷ್ಟನಾಗಿ ಮರೆತು ಸ್ವಧರ್ಮವಗುರು ಹಿರಿಯರ ಸಾಧುಗಳ ನಿಂದಿಸಿಬೆರೆದನ್ಯ ಜಾತಿಯ ಪರನಾರಿಯ ಕೂಡಿಸುರೆ ಕುಡಿದು ಜೂಜಾಡಿ ನರಕಕ್ಕೆ ಬೀಳುವ 3
ಸತ್ಯನೊಬ್ಬ ಮಗ ಶಾಂತನೊಬ್ಬ ಮಗ ದು-ರ್ವೃತ್ತಿ ನಿಗ್ರಹನೊಬ್ಬ ಸಮಚಿತ್ತನೊಬ್ಬನುಉತ್ತಮರೀ ನಾಲ್ಕು ಮಕ್ಕಳಿದ್ದ ಮೇಲೆಹೆತ್ತರೇನು ಇನ್ನು ಹೆರದಿದ್ದರೇನಯ್ಯ ? 4
ಸುತರಿಲ್ಲದವಗೆ ಸದ್ಗತಿ ಇಲ್ಲವೆಂತೆಂಬಕೃತಕ ಶಾಸ್ತ್ರವು ಲೌಕಿಕಭಾವಕೆಕ್ಷಿತಿಯೊಳು ಕಾಗಿನೆಲೆಯಾದಿಕೇಶವ ಜಗ-ತ್ಪತಿಯ ಭಜಿಪಗೆ ಸದ್ಗತಿಯಿರದೆ ಹೋಹುದೆ ? 5
No comments:
Post a Comment