Labels

Saturday, 7 December 2019

ಮರವ ನುಂಗುವ ಪಕ್ಷಿ mara hungama pakshi

ಮರವ ನುಂಗುವ ಪಕ್ಷಿ ಮನೆಯೊಳಗೆ ಬಂದಿದೆ - ಇದರಕುರುಹ ಪೇಳಿ ಕುಳಿತಿರುವ ಜನರು ಪ
ಒಂಟಿ ಕೊಂಬಿನ ಪಕ್ಷಿ ಒಡಲೊಳಗೆ ಕರುಳಿಲ್ಲಗಂಟಲು ಮೂರುಂಟು ಮೂಗು ಇಲ್ಲಕುಂಟು ಮನುಜನ ತೆರದಿ ಕುಳಿತಿಹುದು ಮನೆಯೊಳಗೆ ಎಂಟು ಹತ್ತರ ಭಕ್ಷ್ಯ ಭಕ್ಷಿಸುವುದು 1
ನಡುವೆ ಕಲಿಯುಂಬುವುದು ನಡುನೆತ್ತಿಲಿ ಬಾಯಿಕಡು ಸ್ವರಗಳಿಂದ ಗಾನ ಮಾಡುವುದುಅಡವಿಯಲಿ ಹುಟ್ಟುವುದು ಅಂಗವೆರಡಾಗುವುದುಬಡತನ ಬಂದರೆ ಬಹಳ ರಕ್ಷಿಪುದು 2
ಕಂಜವದನೆಯರ ಕರದಲ್ಲಿ ನಲಿದಾಡುವುದುಎಂಜಲನುಣಿಸುವುದು ಮೂಜಗಕೆರಂಜಿಪ ಶಿಖಾಮಣಿ ಸಿಂಹಾಸನದ ಮೇಲಿರ್ಪಸಂಜೀವ ಪಿತ ಆದಿಕೇಶವನೆ ಬಲ್ಲ 3

No comments:

Post a Comment