Friday, 6 December 2019

ಒಂಬತ್ತು ಹೂವಿಗೆ ಒಂದೇ ombattu huvige onde

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ ಪ
ತುಂಬಿ ನಾಳತುದಿ ತುಂಬಿ ಭಾನು ಪ್ರಭೆ ಚಂದಮಾಮಅ
ಕದರು ಗಾತ್ರ ಕಂಬ ತೆಕ್ಕೆಗಾತರ ಹೂವು ಚಂದಮಾಮಆನೆಗಾತರ ಕಾಯಿ ಒಂಟೆಗಾತರ ಹಣ್ಣು ಚಂದಮಾಮ 1
ಕಾಲಿಲ್ಲದಾತನು ಹತ್ತಿದನು ಮರವನು ಚಂದಮಾಮಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ 2
ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ 3
ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ 4
ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ 5
ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚಂದಮಾಮ ಅಂಗುಳಿಲ್ಲದಾತ ನುಂಗಿದನಾ ಹಣ್ಣ ಚಂದಮಾಮ 6
ಬಾಯಿಲ್ಲದಾತ ತಿಂದು ಬಸಿರಲಿಂಬಿಟ್ಟ ಚಂದಮಾಮಸುಲಭ ಪದವಿದು ನಳಿನಜಾಂಡದೊಳು ಚಂದಮಾಮ 7
ಗುರುವಿನ ಮಹಿಮೆ ಗುರುವೆ ತಾ ಬಲ್ಲನು ಚಂದಮಾಮಮೂಢನಾದವನೇನು ಬಲ್ಲನು ಈ ಮಾತು ಚಂದಮಾಮ 8
ಕನಕನಾಡಿದ ಗುಟ್ಟು ಆದಿಕೇಶವ ಬಲ್ಲ ಚಂದಮಾಮತಿಳಿದವರು ಪೇಳಿರೀ ಹಳೆಗನ್ನಡವ ಚಂದಮಾಮ 9

No comments:

Post a Comment