ಸಾರಿಗೆಯ ಮಾಡೋಣ ಸಜ್ಜನರು ಬನ್ನಿರೋ
ನಾರಾಯಣನ ದಿವ್ಯನಾಮ ಭಾರಿ ಕೊಂಬ ಬನ್ನಿರೋ ಪ.
ಹೃದಯವೆಂಬ ಚೀಲದೊಳಗೆ ಹರಿಯ ನಾಮ ಹೊನ್ನಹಾಕಿ
ತುದಿ ನಾಲಿಗೆಯಿಂದ ತೆಗದು ವೆಚ್ಚವನ್ನು ಮಾಡಿರೊ 1
ಙÁ್ಞನವೆಂಬ ಎತ್ತಿನಲ್ಲಿ ಕರುಣವೆಂಬ ಗೋಣಿಹಾಕಿ
ದಾನ - ಧರ್ಮವೆಂಬ ದವಸ ಸರಕುಗಳ ತುಂಬಿರೊ 2
ನೇಮ - ನಿತ್ಯವೆಂಬ ಗಟ್ಟಿ ನಡುವಿನಲ್ಲಿ ಬಿಗಿದು ಸುತ್ತಿ
ಪ್ರೇಮವೆಂಬ ಚೊಕ್ಕ ಬುತ್ತಿ ಸೆರಗಿನಲ್ಲಿ ಕಟ್ಟಿರೋ 3
ಕಾವಲಿಗರೈವರನ್ನು ಕಾಣದಂತೆ ಟಕ್ಕುದೋರಿ
ಭಾವವೆಂಬ ಮಾರ್ಗದಲ್ಲಿ ಬೇಗ ಬೇಗ ಬನ್ನಿರೊ 4
No comments:
Post a Comment