ಸಜ್ಜನರ ಸಂಗದೊಳಗಿರಿಸೆನ್ನ ರಂಗ ಪ
ದುರ್ಜನರ ಸಂಗ ನಾನೊಲ್ಲೆ ಮಂಗಳಾಂಗಅ
ಕೂಡಿದ ಸಭೆಯಲಿ ಕುತ್ಸಿತವ ನುಡಿವನ ಸಂಗನಾಡಿನೊಳಗನ್ಯಾಯವ ಮಾಡುವನ ಸಂಗಬೇಡಿದರು ಕೊಡದಿರುವ ಕಡುಲೋಭಿಯ ಸಂಗಮೂಢ ಮೂರ್ಖರ ಸಂಗ ಬಲು ಭಂಗ ಎಲೊ ರಂಗ1
ಗುರು ಸತಿಗೆ ಪರಸತಿಗೆ ಎರಡು ಬಗೆವರ ಸಂಗಗುರು ನಿಂದೆ ಪರನಿಂದೆ ಮಾಡುವರ ಸಂಗಪರಹಿತಾರ್ಥದ ಧರ್ಮವರಿಯದವರ ಸಂಗಮರುಳ ಪಾಮರ ಸಂಗ ಬಲು ಭಂಗ ಎಲೊ ರಂಗ 2
ಆಗಮದ ಅನ್ವಯವನರಿಯದವನ ಸಂಗರೋಗದಲಿ ಆವಾಗಲು ಮುಲುಗುವನ ಸಂಗಕಾಗಿನೆಲೆಯಾದಿಕೇಶವನಂಘ್ರಿ ನೆನೆಯದಿಹಭಾಗವತರ ಸಂಗ ಬಲು ಭಂಗ ಎಲೊ ರಂಗ 3
No comments:
Post a Comment