Labels

Sunday, 1 December 2019

ಸತ್ಯವಂತರ ಸಂಗವಿರಲು satyavantara sangaviralu

ಸತ್ಯವಂತರ ಸಂಗವಿರಲು ತೀರ್ಥವ್ಯಾತಕೆನಿತ್ಯ e್ಞÁನಿಯಾದ ಮೇಲೆ ಚಿಂತೆಯಾತಕೆ ಪ
ತಾನು ಉಣ್ಣದ ಪರರಿಗಿಕ್ಕದ ಧನವಿದ್ಯಾತಕೆಮಾನ ಹೀನನಾಗಿ ಬಾಳ್ವ ಮನುಜನ್ಯಾತಕೆe್ಞÁನವಿಲ್ಲದೆ ನೂರು ಕಾಲ ಬದುಕಲ್ಯಾತಕೆಮಾನಿನಿಯ ತೊರೆದ ಮೇಲೆ ಭೋಗವ್ಯಾತಕೆ 1
ಮಾತು ಕೇಳದೆ ಮಲೆತು ನಡೆವ ಮಕ್ಕಳ್ಯಾತಕೆಪ್ರೀತಿಯಿಲ್ಲದೆ ಎಡೆಯಲಿಕ್ಕಿದ ಅನ್ನವ್ಯಾತಕೆನೀತಿಯರಿತು ನಡೆಯದಿರುವ ಬಂಟನ್ಯಾತಕೆಸೋತ ಹೆಣ್ಣಿಗೆ ಓತು ನಡೆಯದ ಪುರುಷನ್ಯಾತಕೆ 2
ಸನ್ನೆಯರಿತು ನಡೆಯದಿರುವ ಸತಿಯು ಯಾತಕೆಮನ್ನಣಿಂದ ನಡೆಸದಿರುವ ದೊರೆಯು ಯಾತಕೆಮುನ್ನ ಕೊಟ್ಟು ಪಡೆಯದಿನ್ನು ಬಯಸಲ್ಯಾತಕೆಚೆನ್ನ ಆದಿಕೇಶವನಲ್ಲದ ದೈವವ್ಯಾತಕೆ 3

No comments:

Post a Comment