ಶರಣು ಸಿದ್ಧಿ ವಿನಾಯಕ ಶರಣು ವಿದ್ಯಾ ಪ್ರದಾಯಕ
ಶರಣು ಪಾರ್ವತಿ ತನಯ ಮೂರುತಿ ಶರಣು ಮೂಷಕ ವಾಹನ ||ಪ||
ನಿಟಿಲ ನೇತ್ರನ ದೇವಿ ಸುತನೆ ನಾಗಭೂಷಣ ಪ್ರಿಯನೆ
ತಟಿಲತಾಂಕಿತ ಕೋಮಲಾಂಗನೆ ಕರ್ಣಕುಂಡಲ ಧಾರನೆ ||೧||
ಬಟ್ಟ ಮುತ್ತಿನ ಪದಕ ಹಾರನೆ ಬಾಹುಹಸ್ತ ಚತುಷ್ಟನೆ
ಇಟ್ಟ ತೊಡುಗೆಯ ಹೇಮ ಕಂಕಣ ಪಾಶ ಅಂಕುಶ ಧರನೆ ||೨||
ಕುಕ್ಷಿ ಮಹಾ ಲಂಬೋದರನೆ ಇಕ್ಷುಚಾಪನ ಗೆಲಿದನೆ
ಪಕ್ಷಿವಾಹನ ಸಿರಿ ಪುರಂದರ ವಿಠಲನ ನಿಜ ದಾಸನೆ ||೩||
No comments:
Post a Comment