Labels

Wednesday, 18 December 2019

ಶ್ರೀಪತಿಯು ನಮಗೆ ಸಂಪದವೀಯಲಿ shreepatiyu namage sampadaveeyali

ಶ್ರೀಪತಿಯು ನಮಗೆ ಸಂಪದವೀಯಲಿ - ವಾ
ಣೀಪತಿಯು ನಮಗೆ ದೀರ್ಘಾಯು ಕೊಡಲಿ ಪ.
ಸುರರ ಗಣವನು ಪೊರೆಯೆ ವಿಷವ ಕಂಠದಲಿಟ್ಟ
ಹರ ನಿತ್ಯ ನಮಗೆ ಸಹಾಯಕನಾಗಲಿ
ಸರರೊಳುನ್ನತವಾದ ನಿತ್ಯ ಭೋಗಂಗಳನು
ಪುರುಹೂತ ಪೂರ್ಣ ಮಾಡಿಸಲಿ ನಮಗೆ 1
ವಿನುತ ಸಿದ್ಧಿಪ್ರದನು ವಿಘ್ನೇಶ ದಯದಿಂದ
ನೆನೆದ ಕಾರ್ಯಗಳೆಲ್ಲ ನೆರವೇರಿಸಲಿ
ದಿನದಿನದಿ ಅಶ್ವಿನಿಗಳಾ¥ತ್ತುಗಳ ಕಳೆದು
ಮನಕೆ ಹರುಷವನಿತ್ತು ಮನ್ನಿಸಲಿ ಬಿಡದೆ 2
ನಿರುತ ಸುe್ಞÁನವನು ಈವ ಮಧ್ವರಾಯ |
ಗುರುಗಳಾಶೀರ್ವಾದ ನಮಗಾಗಲಿ
ಪುರಂದರವಿಠಲನ ಕರುಣದಿಂದಲಿ ಸಕಲ ಸುರರೊಲುಮೆ ನಮಗೆ ಸುಸ್ಥಿರವಾಗಲಿ 3

No comments:

Post a Comment