Labels

Saturday, 21 December 2019

ಸಿಕ್ಕಿದೆಯೋ ಎಲೆ ಜೀವ-ನಿನ್ನ sikkidiyo ele jeeva ninna

ಸಿಕ್ಕಿದೆಯೋ ಎಲೆ ಜೀವ-ನಿನ್ನ-
ಕುಕ್ಕಿ ಕೊಲ್ಲದೆ ಬಿಡರು ಪ
ಸೊಕ್ಕಿದ ಹೆಣ್ಣಿಗೆ ನೀ ಮರುಳಾದೆ |
ಉಕ್ಕಿನ ಕಂಬಕೆ ನೀ ಗುರಿಯಾದೆ ಅ.ಪ
ಹಾಳೂರ ಕೋಳಕೆ-ಕಾಲು ಚಾಚಿದ ಹಾಗೆ |
ಮೂಳ ಸಂಸಾರಕೆ ನೀ ಗುರಿಯಾಗಿ ||
ತೇಲುತ ಮುಳುಗುತ ಇಲ್ಲಿಗೆ ಬಂದೆ 1
ಸತಿ-ಸುತರೆಂಬುವರೆ - ಹಿತರೆಂದು ನಂಬಿದೆಯೊ |
ಯತಿಗಳ ತಿಥಿಗಳು ಬಂದರೆ ಮನೆಗೆ-||
ಗತಿಯಿಲ್ಲವೆಂದು ಖತಿಗೊಂಡೆಯಲ್ಲೊ2
ಶುನಕನಂದದಿ ನೀನು ಮನೆಮನೆಯನು ತಿರುಗಿ |
ಘನ ಘನವಾದ ಕೂಳನೆ ತಿಂದು ||
ತನುವ ತಗ್ಗಿಸಿ ಇಲ್ಲಿಗೆ ಬಂದೆ 3
ಕಂಡವರ ಒಡವೆಯ-ಖಂಡುಗ ಧನವನು |
ಮಿಂಡೆಯರ ಒಡವೆಯ ಭಂಡತನದಲಿ ||
ಕಂಡುಕಾಣದೆ ನೀ ತಿಂದೆಯಲ್ಲೊ 4
ಗೋಪಾಲಕೃಷ್ಣಯ್ಯ-ತಾಪತ್ರಯವ ಕಳೆವ |
ಆಪತ್ತೆಲ್ಲ ಪರಿಹಾರ ಮಾಡುವ ||
ಶ್ರೀಪತಿ ಪುರಂದರವಿಠಲನ ನೆನೆಯದೆ5

No comments:

Post a Comment