ಸುಮ್ಮನೆ ದೊರಕುವುದೇ ಶ್ರೀರಾಮನ ದಿವ್ಯನಾಮವು |
ಜನ್ಮಜನ್ಮಾಂತರದ ದುಷ್ಕರ್ಮ ಹೋದವಗಲ್ಲದೆ ಪ.
ಕಂತುಪಿತನ ಮೂರುತಿಯ ತನ್ನಂತರಂಗದೊಳಿಟ್ಟು |
ಚಿಂತೆ ಎಲ್ಲ ಬಿಟ್ಟು ನಿಶ್ಚಿಂತನಾದವಗಲ್ಲದೆ 1
ಭಕ್ತಿರಸದಲಿ ತನ್ನ ಚಿತ್ತಪರವಶನಾಗಿ |
ಅಚ್ಯುತನ ನಾಮವನು ಬಚ್ಚಿಟ್ಟು ಕೊಂಡವಗಲ್ಲದೆ 2
ತನ್ನೊಳಗೆ ಇದ್ದ ಮೂರುತಿಯ ಕಣ್ಣೊಳಗೆ ತಂದರೆ |
ಆನಂದ ಪೂರ್ಣ ಪುರಂದರವಿಠಲನ ನೋಡಿದವಗಲ್ಲದೆ 3
No comments:
Post a Comment