ವರಕವಿಗಳ ಮುಂದೆ ನರಕವಿಗಳ ವಿದ್ಯೆ ತೋರಬಾರದು - ಈಧರಣಿಯ ಕಲ್ಲಿಗೆ ಶರಣೆಂದು ಪೂಜೆಯ ಮಾಡಬಾರದು ಪ
ಪಾಪಿಗಳಿದ್ದಲ್ಲಿ ರೂಪುಳ್ಳ ವಸ್ತುವ ತೋರಬಾರದು - ಬಹುಕೋಪಿಗಳಿದ್ದಲ್ಲಿ ಅನುಭವಗೋಷ್ಠಿಯ ಮಾಡಬಾರದು1
ಅಡಿ ಸತ್ತ ಮಡಕೆಗೆ ಜೋಡಿಸಿ ಒಲೆಗುಂಡು ಹೂಡಬಾರದು - ಬಹುಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು2
ಹರಿಯ ನಿಂದಿಸಿ ಹರ ಘನನೆಂದು ನರಕಕ್ಕೆ ಬೀಳಬಾರದು - ತಾಪರರನು ಬೈದು ಪಾತಕಕೆ ಮುನ್ನೊಳಗಾಗಬಾರದು 3
ಮಡದಿ ನುಡಿಯ ಕೇಳಿ ಜಗಳಕೊಬ್ಬರ ಕೂಡೆ ಹೋಗಬಾರದು - ಬಾ-ಯ್ಬಡಿಕರು ಇದ್ದಲ್ಲಿ ವಸ್ತಿ ಬಿಡಾರವ ಮಾಡಬಾರದು 4
ಮುಂದೆ ಭಲಾ ಎಂದು ಹಿಂದೆ ನಿಂದಿಪರನ್ನು ಕೂಡಬಾರದು - ನಮ್ಮತಂದೆ ಬಾಡದಾದಿಕೇಶವನ ಸ್ಮರಣೆಯ ಬಿಡಬಾರದು5
No comments:
Post a Comment