ವಿಧಿ ನಿಷೇಧವು ನಿನ್ನವರಿಗೆಂತೊ ಹರಿಯೇ ಪವಿಧಿ ನಿನ್ನ ಸ್ಮರಣೆಯು ನಿಷೇಧ ವಿಸ್ಮøತಿಯೆಂಬವಿಧಿಯನೊಂದನೆ ಬಲ್ಲರಲ್ಲದೇ ಮತ್ತೊಂದು ಅ.ಪಮಿಂದದ್ದೆ ಗಂಗಾದಿ ಪುಣ್ಯತೀರ್ಥಂಗಳುಬಂದದ್ದೆ ಪುಣ್ಯಕಾಲ ಸಾಧುಜನರು ||ನಿಂದದ್ದೆ ಗಯೆ ವಾರಣಾಸಿ ಕುರುಕ್ಷೇತ್ರಸಂದೇಹವೇಕೆ ಮದದಾನೆ ಪೋದುದೆ ಬೀದಿ 1
ಕಂಡಕಂಡಲ್ಲಿ ವಿಶ್ವಾದಿ ಮೂರುತಿಯು ಭೂಮಂಡಲದಿ ಶಯನವೆ ನಮಸ್ಕಾರವು ||ತಂಡತಂಡದ ಕ್ರಿಯೆಗಳೆಲ್ಲ ನಿನ್ನಯ ಪೂಜೆಮಂಡೆ ಬಾಗಿಸಿ ನಮಿಪ ಭಾಗವತ ಜನಕೆ 2
ನಡೆದ ನಡಿಗೆಯು ಎಲ್ಲ ಲಕ್ಷ ಪ್ರದಕ್ಷಿಣೆಯುನುಡಿವ ನುಡಿಗಳು ಎಲ್ಲ ಗಾಯತ್ರಿ ಮಂತ್ರ ||ಕೊಡುವುದೆಲ್ಲವು ಅಗ್ನಿಮುಖದಲ್ಲಿ ಆಹುತಿದೃಢಭಕ್ತರೇನ ಮಾಡಿದರದೇ ಮರ್ಯಾದೆ 3
ನಷ್ಟವಾದುದು ಎಲ್ಲ ಸಂಚಿತದ ಕರ್ಮವುಮುಟ್ಟಲಂಜುವುವೆಲ್ಲ ಆಗಾಮಿಕರ್ಮ ||ಸ್ಪಷ್ಟವಾಗಿರುವ ಪ್ರಾರಬ್ಧ ಕರ್ಮವ ಮೀರಿಸೆಟ್ಟಿಮೆಟ್ಟಿದ್ದೆ ಪಟ್ಟಣವೆಂಬುದೇ ನಿಜವು 4
ಎಲ್ಲಿ ಕುಳ್ಳಿರಲಲ್ಲಿ ಪ್ರಾಯೋಪವೇಶ ಮತ್ತೆಲ್ಲಿ ನೋಡಲು ಮನವು ಅಲ್ಲಿಯೆ ಸಮಾಧಿ ||ಎಲ್ಲೆಲ್ಲಿಯೂ ಪುರಂದರವಿಠಲ ರಾಯನಬಲ್ಲವರಿಗೆಲ್ಲಿಹುದು ಪಾಪ ಪುಣ್ಯದ ಲೇಪ 5
No comments:
Post a Comment