ಯಾದವಗಿರಿವಾಸನಹುದೋ ಶ್ರೀ ನಾರಸಿಂಹಆದಿನಾರಾಯಣ ಅಚ್ಯುತನಹುದೊ ಪ
ಖಳ ಸೋಮಕನ ಕೊಂದು ನೀರ ಮುಳುಗಿ ಬಂದೆಇಳೆಯೊಳು ಸುರಾಸುರರೈತಂದು ಬೆರೆಯಲುಘಳಿಲನೆ ದೇವಜನರು ಬಂದು ನಿಲ್ಲಲುವ್ಯಾಳೇಶನ ಸುತ್ತಿ ಸೆಳೆವ ವೇಳೆಯಲ್ಲಿಇಳಿದು ಪಾತಾಳಕೆ ಪರುವತ ಪೋಪುದ ಕಂಡುನಳಿನನಾಭನೆ ನಿಮ್ಮ ನೆನೆಯಲಾ ಧ್ವನಿ ಕೇಳಿತಿಳಿದು ಕೂರ್ಮರೂಪಾಗಿ ಮಂದರವನು ಪೊತ್ತುಉಳಿಸಿದೆ ಲೋಕವನುನ್ನತ ಪರಾಕ್ರಮಿಖಳ ಹಿರಣ್ಯಕ ಬಂದು ಎದುರಾರು ತನಗೆಂದು ಇಳೆಯ ಕದ್ದೊಯ್ದು ಪೋಗುತಿರೆ ಸುರರದ ಕಂಡುಘಳಲನೆ ನಿಮ್ಮನು ಕೂಗಲಾ ಮೊರೆ ಕೇಳಿತಿಳಿದು ಶಾಂತ ಮೂರುತಿ ಆಗಿ ಪಾವಕ ಮೂರ್ತಿಕಳ್ಳ ದೈತ್ಯರ ಸಂಹಾರವ ಮಾಡಿದೆನಳಿನೋದ್ಭವನಯ್ಯ ಅಮರ ಚೆನ್ನಿಗರಾಯ 1
ಮಠದೊಳಗೆ ಪ್ರಹ್ಲಾದ ಹರನ ನಾಮ ಸ್ಮರಿಸದೆದಿಟದಿ ಹರಿಯ ನಾಮಾವಳಿಯ ನುತಿಪುದ ಕಂಡುಕುಟಿಲ ದಾನವ ನಿಟಿಲನೇತ್ರನ ಸ್ಮರಿಸೆನಲುಕಠಿಣ ನಿಲುವನು ಬಿಡದ ತರಳ ನಿನ್ನಯ ಗುಣವಪಠಿಸಲ್ಕೆ ಪರಮ ಭಕ್ತನ ಕಾಯ ಬೇಕೆಂದುನಟಿಸಿ ಕಂಬದಿ ಮೂಡಿ ನಗುವ ಭಕ್ತನ ನೋಡಿಸಟೆಯಲ್ಲ ಅಜಾಂಡಗಳೊಡೆವಂತೆ ಘರ್ಜಿಸೆಕುಟಿಲ ದಾನವನೋಡುವುದ ಕಂಡು ಎಳೆತಂದುಚಿಟಿಚಿಟಿ ಚಿಟಿರೆನ್ನಲು ಉಗುರಲಿ ಸೀಳಿಪುಟನೆಗೆದ ಪಾದದಲಿ ಬಲಿಯ ತಲೆಯನು ಮೆಟ್ಟಿ ನಟನೆಯಾಡುವ ವಿದ್ಯೆಯನೆಲ್ಲಿ ಕಲಿತೆಯೊ ಕಪಟನಾಟಕ ಸೂತ್ರಧಾರಿ ನೀನಹುದು ಕ್ಷತ್ರಿಯರಚಟುಲ ಛಲದಿ ಒಗೆದು ಕರುಳ ಬಗೆದು ತುಳಿದ-ದಟರನು ಸಂಹರಿಸಿದ ಚೆಲುವರಾಯ 2
ಅಂದು ಕೌಸಲ್ಯಾ ಗರ್ಭ ಚಂದ್ರಮನಾಗಿ ಬೆಳಗಿಕೊಂದೆ ರಾವಣ ಕುಂಭಕರ್ಣಾದಿಗಳನೆಲ್ಲಇಂದಿರೇಶನೆ ನಿನ್ನ ನಂಬಿದ ವಿಭೀಷಣನಿಗೆಎಂದಿಗೂ ಪಾರವಿಲ್ಲದ ಪದವಿಯನಿತ್ತೆಕಂದನಾಗಿ ಜನಿಸಿ ವಸುದೇವ ದೇವಕಿಯರಿಗೆನಂದಗೋಕುಲದೊಳು ನಿಂದ ಕಂಸನ ಕೊಂದೆಚಂದಿರನ ನೆರೆಪೋಲ್ವ ಉನ್ನತೋನ್ನತನಾಗಿಕೊಂದು ತ್ರಿಪುರಾಸುರರ ಅವರ ಸತಿಯರ ಕೆಡೆಸಿಒಂದೆ ನೆಗೆತಕೆ ನೆಗೆವ ಅಶ್ವವನೇರಿದೆ ವ-ಸುಂಧರೆಯ ಮೇಲೆ ಲೀಲೆಯಾಡುತ ಕೃತಯುಗದಿನಿಂದು ಯಾದವಗಿರಿಯ ಮೇಲೆ ತ್ರೇತಾಯುಗದಿಬಂದು ರಾಮನೆನಿಸಿಕೊಂಡೆ ದ್ವಾಪರ ಯುಗದಿಬಂದು ಕೃಷ್ಣನೆನಸಿಕೊಂಡೆ ಕಲಿಯುಗದೊಳುನಿಂದು ಚೆಲುವ ಚೆನ್ನಿಗರಾಯನಾದೆ ವರನಂದಿಯ ಚಂದದಿಂ ರಕ್ಷಿಸಿದೆ ಎನ್ನ ಕಾಯೊಇಂದಿರಾಪ್ರಿಯ ಬಾಡದಾದಿಕೇಶವ ರಾಯ3
No comments:
Post a Comment