Monday, 2 December 2019

ಯಾದವರಾಯ ಬೃಂದಾವನದೊಳು yaadavaraaya brindavanadolu

ಯಾದವರಾಯ ಬೃಂದಾವನದೊಳು ವೇಣುನಾದವ ಮಾಡುತಿರೆ ಪ
ರಾಧೆ ಮುಂತಾದ ಗೋಪಿಯರೆಲ್ಲಮಧುಸೂದನ ನಿಮ್ಮನು ಸೇವಿಸುತ್ತಿರೆ ಅ
ಸುರರು ಅಂಬರದಿ ಸಂದಣಿಸಿರೆ ಅ-ಪ್ಸರ ಸ್ತ್ರೀಯರು ಮೈಮರೆದಿರೆಕರದಲಿ ಕೊಳಲನೂದುತ ಪಾಡುತಸರಿಗಮ ಪದನಿ ಸ್ವರಗಳ ನುಡಿಸುತ 1
ಹರಬ್ರಹ್ಮರು ನಲಿದಾಡುತಿರೆ ತುಂ-ಬುರು ನಾರದರು ಪಾಡುತಿರೆಪರಿಪರಿ ವಿಧದಲಿ ರಾಗವ ನುಡಿಸುತತುರು ಹಿಂಡುಗಳ ಕೂಡುತ ಪಾಡುತ2
ತುರು ಹಿಂಡುಗಳ ತರತರದಲಿ ತನ್ನಕರದಿಂ ಬೋಳೈಸಿ ಸಂತೈಸುತಅರವಿಂದ ನಯನ ಆದಿಕೇಶವರಾಯಕರುಗಳ ಸಹಿತ ಗೋವ್ಗಳ ತಿರುಹುತ3

No comments:

Post a Comment