Labels

Monday, 2 December 2019

ಯಾಕೆ ನೀನಿಲ್ಲಿ yaake neenilli

ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ - ಜಗ ಪ
ದೇಕ ವಿಖ್ಯಾತ ಪಶ್ಚಿಮ ರಂಗಧಾಮ ಅ
ತಮನೊಡನೆ ಹೋರಿ ಬೆಟ್ಟವನು ಬೆನ್ನಲಿ ಪೊತ್ತುರಮಣಿ ಭೂಮಿಯನು ತಂದಾಯಾಸವೂಅಮರವೈರಿಯ ಕರುಳ ಕಿತ್ತ ಕಡು ಧಾವತಿಯೊಕ್ಷಮೆಯನಳೆದೀ ಪಾದಕಮಲ ನೊಂದವೊ 1
ಪೊಡವಿಪಾಲಕರ ವಂಶವನು ವಪನ ಮಾಡಿಕೊಡಲಿಯನು ಬಿಸುಟು ಮಲಗಿದ ಭಾವವೊಮಡದಿಯನು ಕದ್ದೊಯ್ದವನ ಶಿರವನೆ ತರಿದುಒಡಲಿನಾಯಾಸದಲಿ ಪವಡಿಸಿದ ಪರಿಯೋ 2
ವಾಲಿ ಮೊದಲಾದ ಎದುರಾಂತ ವೀರರ ಕೊಂದುಕಾಳಿಯ ಹೆಡೆಯ ತುಳಿತುಳಿದು ಮೈಯಲಸಿತೊಲೀಲೆಗೋಸುಗ ಬಂದು ನಿರ್ವಾಣದಲಿ ನಿಂದುಆ ಲಜ್ಜೆಗಾಗಿ ತಲೆ ಬಾಗಿ ಮಲಗಿದೆಯೊ 3
ನಾಲ್ಕು ಯುಗದಾಧಾರಿ ಕಡೆಗೆ ತುರಗವನೇರಿಸಾಕಾಗಿ ದಣಿದು ನೀನಿಲ್ಲಿ ಮಲಗಿದೆಯೊಸಾಕಾರಿಯಾಗಿ ಗೌತಮ ಮುನೀಶ್ವರನಿಗೆಬೇಕೆಂದು ನೀ ಕೊಟ್ಟ ವರಕೆ ಮಲಗಿದೆಯೊ 4
ಇನ್ನೆಷ್ಟು ಕಾಲ ನೀನಿಲ್ಲಿ ಮಲಗಿದ್ದರೂನಿನ್ನನೆಬ್ಬಿಸುವವರನೊಬ್ಬರನು ಕಾಣೆಉನ್ನಂತ ಕಾಗಿನೆಲೆಯಾದಿಕೇಶವರಾಯಚೆನ್ನ ಶ್ರೀರಂಗಪಟ್ಟಣದ ರಂಗಧಾಮ 5

No comments:

Post a Comment