ಯಾಕೆಲೊ ರಂಗ ನಿನಗಿಂತು ನಟನೆಯ ಮಾತು ಪ
ಮಾಕಾಂತ ಕರೆಸಿದರೆ ಬಾರದಿಹ ಪೊಗರುಅ
ಗೊಲ್ಲತನವಂ ಬಿಡಿಸಿ ಗೋಗಾವ ಡಿಂಬ್ಹರಿಸಿಉಳ್ಳ ತಸ್ಕರ ಬುದ್ಧಿ ಕಡೆಗೆ ಇರಿಸಿಬಾಲಕನ ವಂದರಿಸಿ ಬಹುಭಾಗ್ಯವಂತನೆನಿಸಿಎಲ್ಲರೊಳು ಸಲಿಗೆ ನಿಲಿಸಿದಳೊ ನಿಮ್ಮರಸಿ 1
ಕೆಸರ ಚೊಗೆಯಂ ಬಿಡಿಸಿ ಗುಂಜ ಸರವಂ ತೆಗೆಸಿಬಿಸರುಹ ಮಣಿಮಾಲೆ ಕಡೆಗೆ ಇಡಿಸಿಪೊಸ ಪೀತಾಂಬರ ಉಡಿಸಿ ನವರತ್ನವಂ ತೊಡಿಸಿವಸುಧೆಯೊಳು ಮಿಗಿಲಾಗಿ ನಿಲಿಸಿದಳೊ ನಮಿಸಿ 2
ಎನ್ನ ಮಾತನು ಕೇಳು ಮುನಿಸು ಕೃತ್ಯವ ಸೀಳುಇನ್ಯಾಕೆ ಯೋಚನೆ ಫಲವ ಪೇಳುಬಿನ್ನಹವನು ಕೇಳು ನೆರೆಗೂಡಿ ಸುಖಬಾಳುಚೆನ್ನ ಬಾಡದಾದಿಕೇಶವ ದಯಾಳು 3
No comments:
Post a Comment