Labels

Saturday 25 January 2020

ಬಲು ರಮ್ಯವಾಗಿದೆ ಹರಿಯ ಮಂಚ balu ramyavaagide hariya mancha


ಬಲು ರಮ್ಯವಾಗಿದೆ ಹರಿಯ ಮಂಚ ಪ
ಎಲರುಣಿಕುಲ ರಾಜ ರಾಜೇಶ್ವರನ ಮಂಚಅ.ಪ.
ಪವನತನಯನ ಮಂಚ ಪಾವನತರ ಮಂಚ
ಭುವನತ್ರಯನ ಪೊತ್ತ ಭಾರಿಮಂಚ
ಕಿವಿಗಳಿಲ್ಲದ ಮಂಚ ಶ್ರೀನಿಕೇತನ ಮಂಚ
ಶಿವರೂಪದಲಿ ಹಿಂದೆ ಹರಿಯನೊಲಿಸಿದ ಮಂಚ 1
ನೀಲಾಂಬರವನುಟ್ಟು ನಳನಳಿಸುವ ಮಂಚ
ನಾಲಗೆ ಎರಡುಳ್ಳ ನೈಜಮಂಚ
ನಾಲ್ವತ್ತು ಕಲ್ಪದಿ ತಪವ ಮಡಿದ ಮಂಚ
ತಾಲ ಮುಸಲ ಹಲವ ಪಿಡಿದಿರುವ ಮಂಚ 2
ರಾಮನನುಜನಾಗಿ ರಣವ ಜಯಿಸಿದ ಮಂಚ
ತಾಮಸ ರುದ್ರನನು ಪಡೆದ ಮಂಚ
ಭಿಮಾವರಜನೊಳು ಆವೇಶಿಸಿದ ಮಂಚ
ಜೀಮೂತ ಮಂಡಲವ ತಡೆಗಟ್ಟಿದ ಮಂಚ 3
ಜೀವನಾಮಕನೆನಿಸಿ ವ್ಯಾಪ್ತನಾದ ಹರಿಯ
ಸೇವಿಸಿ ಸುಖಿಸುವ ದಿವ್ಯ ಮಂಚ
ಸಾವಿರ ಮುಖದಿಂದ ತುತ್ತಿಸಿ ಹಿಗ್ಗುವ ಮಂಚ
ದೇವಕೀಜಠರದಿ ಜನಿಸಿದ ಮಂಚ4

ವಾರುಣೀ ದೇವಿ ವರನೆನಿಸಿದ ಮಂಚ
ಸಾರುವ ಭಕುತರ ಸಲಹೊ ಮಂಚ
ಕಾರುಣ್ಯನಿಧಿ ಜಗನ್ನಾಥ ವಿಠಲನ ವಿ
ಹಾರಕ್ಕೆ ಯೋಗ್ಯವಾದ ವಿಮಲ ಶೇಷ ಮಂಚ5


No comments:

Post a Comment