Wednesday, 15 January 2020

ದೇವ ಬಂದ ನಮ್ಮ ಸ್ವಾಮಿ ಬಂದನೋ deva banda namma swami


ದೇವ ಬಂದ ನಮ್ಮ ಸ್ವಾಮಿ ಬಂದನೋ
ದೇವರ ದೇವ ಶಿಖಾಮಣಿ ಬಂದನೋ ಪ
ಉರಗಶಯನ ಬಂದ ಗರುಡ ಗಮನ ಬಂದ
ನರಗೊಲಿದವ ಬಂದ ನಾರಾಯಣ ಬಂದ1
ಮಂದರೋದ್ಧಾರ ಬಂದ ಮಾಮನೋಹರ ಬಂದ
ವೃಂದಾವನ ಪತಿ ಗೋವಿಂದ ಬಂದ 2
ನಕ್ರಹರನು ಬಂದ ಚಕ್ರಧರನು ಬಂದ
ಅಕ್ರೂರಗೊಲಿದ ತ್ರಿವಿಕ್ರಮ ಬಂದ3
ಪಕ್ಷಿವಾಹನ ಬಂದ ಲಕ್ಷ್ಮಣಾಗ್ರಜ ಬಂದ
ಅಕ್ಷಯ ಫಲದ ಶ್ರೀ ಲಕ್ಷ್ಮೀ ರಮಣ ಬಂದ 4
ನಿಗಮಗೋಚರ ಬಂದ ನಿತ್ಯ ತೃಪ್ತನು ಬಂದನಗೆ ಮುಖ ಪುರಂದರ ವಿಠಲ ಬಂದನೋ 5


No comments:

Post a Comment