Labels

Wednesday 15 January 2020

ಧರ್ಮವೆಂಬ ಸಂಬಳವ ಗಳಿಸಿಕೊಳ್ಳಿರೊ dharmavemba sambhala


ಧರ್ಮವೆಂಬ ಸಂಬಳವ ಗಳಿಸಿಕೊಳ್ಳಿರೊ |
ಹೆಮ್ಮೆಯಿಂದ ಈ ಶರೀರ ನಂಬಬೇಡಿ ಕಾಣಿರೊಪ.
ಅಟ್ಟ ಅಡಿಗೆ ಉಣಲು ಕೊಡನು ಕೊಟ್ಟ ಸಾಲ ಕೇಳಗೊಡನು |
ಪೆಟ್ಟಿಗೆ ತುಂಬ ಹಣವು ಇದ್ದರೆ ಕೊಟ್ಟೆನೆಂದರೆ ಬಿಡನು ಯಮನು 1
ಮಾಳಿಗೆ ಮನೆಯ ಇರಲು ಜಾಳಿಗೆ ತುಂಬ ಹೊನ್ನು ಇರಲು |
ಆಳುಮಂದಿ ಕುದುರೆ ಇದ್ದರೆ ಬೀಳುಗೊಡದೆ ಯಮನು ಬಿಡನು 2
ವ್ಯರ್ಥವಾದ ಈ ಶರೀರ ಸತ್ಯವೆಂದು ನಂಬಬೇಡಿ |
ಕರ್ತು ಪುರಂದರವಿಠಲರಾಯನ ಭಕ್ತಿಯಿಂದ ನೆನೆಯಿರೊ 3


No comments:

Post a Comment