Labels

Wednesday 15 January 2020

ದುರಿತವೆತ್ತಣದೊ ದುರ್ಗತಿಯು ಎಲ್ಲಿಹುದೊ duritavettanado


ದುರಿತವೆತ್ತಣದೊ ದುರ್ಗತಿಯು ಎಲ್ಲಿಹುದೊ ?
ಹರಿನಾಮ ಸ್ಮರಣೆಯೆಚ್ಚರದಲ್ಲಿದ್ದವರಿಗೆ ಪ.
ಸ್ನಾನವೇತಕೆ ಸಂಧ್ಯಾ ಜಪತಪವೇತಕೆ ಮೌನವೇತಕೆ ಮಾಸವ್ರತವೇತಕೆ ||
ಮಾನಸದಲಿ ವಿಷ್ಣುಧ್ಯಾನವ ಮಾಡುವ ಜ್ಞಾನವಂತರ ಸಂಗಸುಖದೊಳಿಪ್ಪವರಿಗೆ 1
ಯಾತ್ರೆಯೇತಕೆ ಕ್ಷೇತ್ರಗಳ ನೋಡಲೇತಕೆ ಗೋತ್ರಧರ್ಮದ ಪುಣ್ಯ ಫಲವೇತಕೆ ? ||
ಸೂತ್ರದಿ ಜಗವ ಮೋಹಿಸುವ ಮುರಾರಿಯ ಸ್ತೋತ್ರ ಮಾಡಿ ಪೊಗಳುವ ಭಾಗವತರಿಗೆ 2
ಅಂಗದಂಡನೆ ಏಕೆ ಆತ್ಮಗಾಸಿಯು ಏಕೆ ತಿಂಗಳ ಚಾಂದ್ರಾಯಣವೇತಕೆ ? ||
ಮಂಗಳ ಮಹಿಮ ಶ್ರೀ ಪುರಂದರವಿಠಲನ ಹಿಂಗದರ್ಚನೆ ಮಾಡುವ ಭಕ್ತ ಜನರಿಗೆ 3


No comments:

Post a Comment