ಕಂಡು ಕಂಡು ನೀ ಎನ್ನ ಕೈ ಬಿಡುವರೇ ಕೃಷ್ಣಾ ।।ಪ॥
ಪುಂಡರೀಕಾಕ್ಷ ಶ್ರೀ ಪುರುಷೋತ್ತಮ ಹರಿ ।।ಅ.ಪ॥
ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ
ನಿಂದೆಯಲಿ ನೊಂದೆನೈ ನೀರಜಾಕ್ಷ
ತಂದೆತಾಯಿಯು ನೀನೆ ಬಂಧುಬಳಗವು ನೀನೆ
ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ ।।೧।।
ನಿಂದೆಯಲಿ ನೊಂದೆನೈ ನೀರಜಾಕ್ಷ
ತಂದೆತಾಯಿಯು ನೀನೆ ಬಂಧುಬಳಗವು ನೀನೆ
ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ ।।೧।।
ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ
ಎಣಿಸಲಾರದ ಭವದಿ ಕಡುನೊಂದೆ ನಾನು
ಸನಕಾದಿ ಮುನಿವಂದ್ಯ ವನಜಸಂಭವ ಜನಕ
ಫಣಿಶಾಯಿ ಪ್ರಹ್ಲಾದಗೊಲಿದ ಶ್ರೀಕೃಷ್ಣಾ ।।೨।।
ಎಣಿಸಲಾರದ ಭವದಿ ಕಡುನೊಂದೆ ನಾನು
ಸನಕಾದಿ ಮುನಿವಂದ್ಯ ವನಜಸಂಭವ ಜನಕ
ಫಣಿಶಾಯಿ ಪ್ರಹ್ಲಾದಗೊಲಿದ ಶ್ರೀಕೃಷ್ಣಾ ।।೨।।
ಭಕ್ತವತ್ಸಲನೆಂಬೊ ಬಿರುದು ಪೊತ್ತಮೇಲೆ
ಭಕ್ತರಾಧೀನನಾಗಿರಬೇಡವೆ
ಮುಕ್ತಿದಾಯಕ ದೇವ ಪುರಂದರವಿಠಲನೆ
ಶಕ್ತ ನೀನಹುದೆಂದು ನಂಬಿದೆನೊ ಶ್ರೀಕೃಷ್ಣಾ ।।೩।।
ಭಕ್ತರಾಧೀನನಾಗಿರಬೇಡವೆ
ಮುಕ್ತಿದಾಯಕ ದೇವ ಪುರಂದರವಿಠಲನೆ
ಶಕ್ತ ನೀನಹುದೆಂದು ನಂಬಿದೆನೊ ಶ್ರೀಕೃಷ್ಣಾ ।।೩।।
No comments:
Post a Comment