ನಂಬದಿರು ಈ ದೇಹ ನಿತ್ಯವಲ್ಲ ಅಂಬುಜಾಕ್ಷನ ಭಜಿಸಿ ಸುಖಿಯಾಗು ಮನವೇ ಪ.
ಎಲು ರಕ್ತ ಮಾಂಸಗಳ ಮೇಲೆ ಚರ್ಮದ ಹೊದಿಕೆ ಮಲಮೂತ್ರ ಒಳಗೆ ಕ್ರಿಮಿರಾಶಿಯಿಹವು ||
ಹಲವು ವ್ಯಾಧಿಯ ಬೀಡು ಪಂಚಭೂತದ ನಾಡು ಹುಲುದೇಹವನು ನೆಚ್ಚಿ ಕೆಡಬೇಡ ಮನವೆ 1
ಸತಿಸುತರು ಹಿತರೆಂದು ಮತಿಮರೆತು ಮಮತೆಯಲಿ |ಅತಿಕಾಂಕ್ಷಿಯಿಂದ ದುರ್ವಿಷಯ ಬಲಿದು ||
ಸತತ ಲಕ್ಷ್ಮೀಪತಿಯ ಶರಣೆನದೆ ಇಹಪರದ ಗತಿಶೂನ್ಯನಾಗಿ ಕೆಡಬೇಡ ಮನವೆ 2
ಪರರ ನಿಂದಿಸದೆ ಪರವಧಗಳನು ಬಯಸದೆ ಗುರು - ವಿಪ್ರಸೇವೆಯನು ಮಾಡು ಬಿಡದೆ ||
ಹರಿಸ್ತುತಿಯ ನೀ ಕೇಳು ಹರಿಕೀರ್ತನೆಯ ಪಾಡು ಪರಮ ಪುರಂದರವಿಠಲನೊಲಿದು ಪಾಲಿಸುವ 3
No comments:
Post a Comment