Wednesday, 15 January 2020

ನಂಬದಿರು ಈ ದೇಹ ನಿತ್ಯವಲ್ಲ nambadiru deha nityavalla


ನಂಬದಿರು ಈ ದೇಹ ನಿತ್ಯವಲ್ಲ  ಅಂಬುಜಾಕ್ಷನ ಭಜಿಸಿ ಸುಖಿಯಾಗು ಮನವೇ ಪ.
ಎಲು ರಕ್ತ ಮಾಂಸಗಳ ಮೇಲೆ ಚರ್ಮದ ಹೊದಿಕೆ  ಮಲಮೂತ್ರ ಒಳಗೆ ಕ್ರಿಮಿರಾಶಿಯಿಹವು ||
ಹಲವು ವ್ಯಾಧಿಯ ಬೀಡು ಪಂಚಭೂತದ ನಾಡು  ಹುಲುದೇಹವನು ನೆಚ್ಚಿ ಕೆಡಬೇಡ ಮನವೆ 1
ಸತಿಸುತರು ಹಿತರೆಂದು ಮತಿಮರೆತು ಮಮತೆಯಲಿ |ಅತಿಕಾಂಕ್ಷಿಯಿಂದ ದುರ್ವಿಷಯ ಬಲಿದು ||
ಸತತ ಲಕ್ಷ್ಮೀಪತಿಯ ಶರಣೆನದೆ ಇಹಪರದ  ಗತಿಶೂನ್ಯನಾಗಿ ಕೆಡಬೇಡ ಮನವೆ 2
ಪರರ ನಿಂದಿಸದೆ ಪರವಧಗಳನು ಬಯಸದೆ  ಗುರು - ವಿಪ್ರಸೇವೆಯನು ಮಾಡು ಬಿಡದೆ ||
ಹರಿಸ್ತುತಿಯ ನೀ ಕೇಳು ಹರಿಕೀರ್ತನೆಯ ಪಾಡು  ಪರಮ ಪುರಂದರವಿಠಲನೊಲಿದು ಪಾಲಿಸುವ 3


No comments:

Post a Comment