Thursday, 5 March 2020

ಆನಂದ ಸಾಗರದ ಸೌಖ್ಯವೇಂ anandsa sagarada soukhyavem


ಆನಂದ ಸಾಗರದ ಸೌಖ್ಯವೇಂ ನುತಿಪೆ ಪ.
ಆನಂದ ಶ್ರೀ ಗುರುಗಳತಿ ಕೃಪೆಯೊಳಿತ್ತ ಅ.ಪ.

ಗಾನಲೋಲನ ಮಹಿಮೆ e್ಞÁನ ಬೋಧನೆಯಿಂದ
ನಾನಾಪ್ರಕಾರದಿಂ ವರ್ಣಿಸುತಲಿ
ಮಾನಿನಿಯ ಮನದ ಶೋಕಾಗ್ನಿ ಶಾಂತಿಯಗೈಸಿ
ಮಾನಸದಿ ನಲಿವಂತೆ ಮಮತೆಯೊಳು ಪೊರೆದ 1
ರಾಮಚಂದ್ರನ ಮಹಿಮೆ ನೇಮದಿಂದಲಿ ಪಠಿಸೆ
ಸೋಮಕಳೆ ಪೌರ್ಣಿಮ ಸ್ಥಿರವಾರದಿ
ರಾಮಪಟ್ಟಾಭಿಷೇಕದ ಮಹೋತ್ಸವ ನಡೆಸೆ
ಕಾಮಧೇನುವು ಎನುತ ಕರೆದು ಮುದವಿತ್ತು 2
ಕಲುಷ ಲಿಂಗದ ಕಳೆಯ ಕಳೆದು ಚಂದ್ರನೊಳಿಟ್ಟು ಅ-
ನಿಲ ಭಾರತಿಯರ ವ್ಯಾಪಾರ ತಿಳಿಸಿ
ಜಲಜಾಕ್ಷ ಗೋಪಾಲಕೃಷ್ಣವಿಠ್ಠಲ ಮನದಿ
ನೆಲಸಿ ಮುಕ್ತಿಯ ಕೊಡುವ ಮಾರ್ಗ ತೋರಿದರು3


No comments:

Post a Comment