Labels

Sunday 29 March 2020

ಏನು, ಬರೆದೆಯೊ ಬ್ರಹ್ಮ ಎಂತು ನಿರ್ದಯನು-ಅಭಿ |


ಏನು, ಬರೆದೆಯೊ ಬ್ರಹ್ಮ ಎಂತು ನಿರ್ದಯನು-ಅಭಿ |
ಮಾನವನು ತೊರೆದು ಪರರನು ಪೀಡಿಸುವುದ ಪ
ಬಲ್ಲಿದರ ಮನೆಯ ಬಾಗಿಲ ಕಾಯ್ದು ಬೇಸತ್ತು |
ಸೊಲ್ಲು ಸೊಲ್ಲಿಗೆ ಅವರ ಕೊಂಡಾಡುತ ||
ಇಲ್ಲ ಈ ವೇಳೆಯಲಿ ನಾಳೆ ಬಾ-ಎನಲಾಗಿ |
ಅಲ್ಲವನೆ ತಿಂದ ಇಲಿಯಂತೆ ಬಳಲುವುದ 1
ಗೇಣೊಡಲ ಹೊರೆವುದಕೆ ಹೋಗಿ ನರರೊಳು ಪಂಚ-|
ಬಾಣ ಸಮರೂಪ ನೀನೆಂದು ಪೊಗಳೆ ||
ಮಾಣು ಎನ್ನಾಣೆ ನೀ ನಾಳೆ ಬಾ ಎಂದೆನಲು |
ಗಾಣ ತಿರುಗುವ ಎತ್ತಿನಂತೆ ಬಳಲುವುದ 2
ಹಿಂದೆ ಬರೆದಾ ಬರೆಹ ಏನಾದರಾಗಲಿ |
ಮುಂದೆನ್ನ ವಂಶದಲಿ ಪುಟ್ಟುವರಿಗೆ ||
ಸಂದೇಹ ಬೇಡ ಶ್ರೀ ಪುರಂದರ ವಿಠಲನೇ |
ಕಂದರ್ಪನಯ್ಯ ಉಡುಪಿಯ ಕೃಷ್ಣರಾಯ 3


No comments:

Post a Comment