ಕೊಟ್ಟಸಾಲ ಕೊಡದೆ ಭಂಡಾಟ ಮಾಡುತಿಹನೆ |
ಎಷ್ಟು ಕೇಳಿದರೆನಗೆ ಓಯೆನ್ನದಿಹನೆ ಪ
ಭರದಿ ಕೇಳಲು ಜಲದಿ ಕಣ್ಣ ಬಿಡುತಿಹನೆ |
ತರುಬಿ ಕೇಳಲು ಕಲ್ಲು ಹೊತ್ತು ನಿಂತಿಹನೆ ||
ಮರಳಿ ಕೇಳಲು ಊರ ಅಡವಿ ಸೇರುವನೆ |
ಇರುಳು ಹಗಲೆಲ್ಲ ಕಾಣಿಸಿಕೊಳ್ಳದಿಹನೆ 1
ಕಂಡು ನಿಲ್ಲಿಸಲೊಂದು ಕಾಲಲಿ ನಿಲುವನೆ |
ಕೊಂಡ ಸಾಲಕೆ ಕೊಡಲಿ ಪಿಡಿದು ನಿಲ್ಲುವನೆ ||
ಉಂಡರಾಣಿಯೆಂದು ಉಪವಾಸವಿರುವನೆ |
ಬಂಡನಂದದಿ ಠಕ್ಕುಟೌಳಿ ನಡಿಸುವನೆ 2
ಕೆಟ್ಟ ಬಯಲುಲಜ್ಜೆ ಹೇವ ತೊರೆಯುವನೆ |
ಕೊಟ್ಟು ಪೋಗೆನ್ನಲು ಕಲಿಯು ಆಗುವನೆ ||
ಸೃಷ್ಟಿಗೊಡೆಯ ಶ್ರೀರಂಗಪಟ್ಟಣದ ಪುರಂದರ |
ವಿಠಲೇಶನು ನಮ್ಮ ಪಶ್ಚಿಮರಂಗನಾಥನು 3
No comments:
Post a Comment