Monday, 30 March 2020

ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲ


ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲ
ಭ್ರಷ್ಟಮಾನವ ಹಣೆಯ ಬರಹವನ್ನದೆ ಇಲ್ಲ ಪ
ಸಿರಿವಂತನ ಸ್ನೇಹಮಾಡಿ ನಡೆದರಿಲ್ಲ
ಪರಿಪರಿಯಲಿ ವಿದ್ಯ ಕಲಿತರಿಲ್ಲ
ನರಿಯ ಬುಧ್ಧಿಯಲಿ ನಡೆದುಕೊಂಡರು ಇಲ್ಲ
ಅರಿಯದೆ ಹಲವ ಹಂಬಲಿಸಿದರಿಲ್ಲ 1
ಕೊಂಡೆಗಾರಿಕೆಯನ್ನು ಹೇಳಿ ನಡೆದರಿಲ್ಲ
ಕಂಡಕಂಡವರಿಗೆ ಕೈ ಮುಗಿದರಿಲ್ಲ
ಗಂಡುಗತ್ತರಿಯನ್ನು ಕೊರಳಿಗಿಟ್ಟರು ಇಲ್ಲ
ಚಂಡನಾದರೂ ಇಲ್ಲ ಪರಿಹಾಸ್ಯವಲ್ಲ 2
ಕಟ್ಟಾಳು ಕಂಡು ಜಾಣನಾಗಿ ಪುಟ್ಟಿದರಿಲ್ಲ
ಬೆಟ್ಟಗಳನು ಕಿತ್ತಟ್ಟರಿಲ್ಲ
ಸೃಷ್ಟಿಯೊಳು ಪುರಂದರವಿಠಲರಾಯ
ಕೊಟ್ಟವರಿಗೆ ಉಂಟು ಕೊಡದವರಿಗೆ ಇಲ್ಲ* 3


No comments:

Post a Comment