Labels

Tuesday, 31 March 2020

ಕೊಡುವುದೆಂದು ಎನ್ನ ಕೊಂಬುದೆಂದು-ಕೈ-|


ಕೊಡುವುದೆಂದು ಎನ್ನ ಕೊಂಬುದೆಂದು-ಕೈ-|
ಪಿಡಿವುದೆಂದು ನೀ ಒಲಿವುದೆಂದು ಪ
ಕೊಡುಕೊಂಬ ಮಹದನುಗ್ರಹದವನೆಂದು ನಿ-|
ನ್ನಡಿಗೆ ಸೇರಿದೆನಯ್ಯ ಬಡತನಕೌಷಧ ಅ.ಪ
ಶ್ವಾನಸೂಕರ ಜನ್ಮ ನಾನುಂಬೆ ನನ್ನಲ್ಲಿ |
ನೀನೇ ತತ್ತದ್ರೂಪನಾದೆಯಲ್ಲ ||
ಹೀನರೊಳ್ ನಾನತಿ ಹೀನನಾಗಿ-ಅಭಿ-|
ಮಾನಿಯಾಗಿ ಕಾಲಕಳೆದೆನಲ್ಲ ||
ವಾನರನಂಗೈಯ ಮಾಣಿಕ್ಯದಂತೆನ್ನ |
ಮಾನದಂತರ್ಯಾಮಿ ಸಿಕ್ಕೆಯಲ್ಲ ||
ಏನೇ ಆದರು ನಿನ್ನೊಳೆನಗೆ ಮುಂದೆ ಭಕ್ತಿ-|
ಙÁ್ಞನ-ವೈರಾಗ್ಯ ಭಾಗ್ಯಗಳನು ದೇವ 1
ಕಾಡಿನ ಮೃಗವು ತಾ ಹಾಡಿದರೆ ನಂಬಿ |
ಆಡುವುದಲ್ಲದೆ ಓಡುವುದೆ? ||
ಕಾಡುವ ಪಶುವಿನ ಬಾಲವ ಕಟ್ಟಿಸಿ |
ಕೂಡೆ ಪಾಲ್ಗರೆಯಲು ಒದೆಯುವುದೆ? ||
ಆಡುವ ಶಿಶು ತಪ್ಪಮಾಡಲು ಜನನಿ-ಕೊಂ-|
ಡಾಡುವಳಲ್ಲದೆ ದೂಡುವಳೆ ||
ಮೂಢ ಬುದ್ದಿಯೊಳು ಕೆಟ್ಟಿನೆಂದು-ಕೋಪ |
ಮಾಡಬೇಡ ದಯೆಮಾಡಿ ನೀಡಿಷ್ಟವ 2
ಹಣ್ಣಾದ ಹೊತ್ತು ಬಾಯ್ ಹುಣ್ಣಾದ ತೆರನಂತೆ |
ನಿನ್ನ ಸೇರುವ ಯತ್ನ ಬಿಟ್ಟು ನಾನು ||
ಹೆಣ್ಣು ಹೊನ್ನು ಮಣ್ಣಿಗಾಗಿಯೆ ಭ್ರಮೆಗೊಂಡೆ |
ಸುಣ್ಣಕಿಕ್ಕಿದ ನೀರಿನಂತಾದೆನು ||
ಎನ್ನಪರಾಧವನಂತ ಕ್ಷಮಿಸು ನೀನು |
ಮನ್ನಿಸದಿರಲಾರಿಗೆ ಪೇಳ್ವೆನು ||
ಓಂ ನಮೋ ಶ್ರೀ ಹರಿ ಎಂಬ ಪೂರ್ಣಙÁ್ಞನ-|
ವನ್ನು ಪುರಂದರವಿಠಲನ ಎನ್ನಪ್ಪನೆ 3


No comments:

Post a Comment