ತೇಲಿಸೊ ಇಲ್ಲ ಮುಳುಗಿಸೊ ನಿನ್ನ ಪಾಲಿಗೆ ಬಿದ್ದೆನೊ ಪರಮ ದಯಾಳೊ \\ಪ\\
ಸತಿಸುತ ಧನದಾಶೆ ಎಂತೆಂಬ ಮೋಹದಿ ಹಿತದಿಂದ ಅತಿನೊಂದು ಬಳಲಿದೆನೊ ||
ಗತಿಯನೀವರ ಕಾಣೆ ಮೊರೆಯ ಲಾಲಿಸೊ ಲಕ್ಷ್ಮೀ ಪತಿ ನಿನ್ನ ಚರಣದ ಸ್ಮರಣೆಯಿತ್ತೆನ್ನ \\1\\
ಜರೆ ರೋಗ ದಾರಿದ್ರ್ಯ ಕಶ್ಮಲವೆಂತೆಂಬ ಶರಧಿಯೊಳಗೆ ಬಿದ್ದು ಮುಳುಗಿದೆನೊ ||
ಸ್ಥಿರವಲ್ಲ ಈ ದೇಹ ನೆರೆನಂಬಿದೆನು ನಿನ್ನ ಕರುಣಾಭಯವನಿತ್ತು ಪಾಲಿಸೊ ಹರಿಯೆ \\2\\
ದೋಷವುಳ್ಳವ ನಾನು ಭಾಷೆಯುಳ್ಳವ ನೀನು ಮೋಸ ಹೋದೆನೊ ಭಕ್ತಿರಸವ ಬಿಟ್ಟು ||
ದಾಸರ ಸಂಗವಿತ್ತು ಪಾಲಿಸೊ ಹರಿಯೆ\\ 3\\
No comments:
Post a Comment